Wednesday, May 21, 2025
Google search engine

Homeರಾಜ್ಯಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಗುರುವಾರ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.
ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ ಈ ದರ ಹೆಚ್ಚಳ ಜಾರಿಗೆ ಬಂದಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬ್ರಾಂದಿ, ವಿಸ್ಕಿ, ಜಿನ್, ರಮ್ ಮತ್ತು ಅಂಥಹ ಇತರ ಮದ್ಯಗಳ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿತ್ತು. ಅಲ್ಲದೆ, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಿದ್ದನ್ನು ತಿಳಿಸಿತ್ತು.
ಹೀಗಾಗಿ ಹಾಲಿ ದರಕ್ಕೆ ಹೋಲಿಸಿದಾಗ ಶೇ.10ರಷ್ಟು ಬಿಯರ್ ದರ ಹೆಚ್ಚಳವಾಗಲಿದೆ. ಭಾರತೀಯ ಮದ್ಯ (ಐಎಂಎಲ್) ಒಂದು ಪೆಗ್ (60 ಎಂಎಲ್ )ಗೆ 10ರಿಂದ 20 ರೂ. ಹಾಗೂ ಬಿಯರ್ ಬೆಲೆ ಪ್ರತಿ ಬಾಟಲ್‌ಗೆ ಶೇ.10ರಷ್ಟು ಹೆಚ್ಚಳವಾಗಲಿದೆ. ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಲು ಆದಾಯ ಹೆಚ್ಚಿಸಬೇಕಾದ ಅನಿವಾರ್ಯತೆ ಕಾಂಗ್ರೆಸ್‌ ಸರಕಾರದ್ದು.

ಇದರ ಪರಿಣಾಮವಾಗಿ ನಿರೀಕ್ಷೆಯಂತೆಯೇ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175ರಿಂದ ಶೇ.185ಕ್ಕೆ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳು 1968, ಕರ್ನಾಟಕ ಅಬಕಾರಿ ಅಧಿನಿಯಮ 1965, (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ರ 71ನೇ ಪ್ರಕರಣದ 1ನೇ ಉಪ ಪ್ರಕರಣದಲ್ಲಿ ತಿದ್ದುಪಡಿ ಮಾಡಿ ಸರಕಾರ ಅಧಿಸೂಚನೆ ಪ್ರಕಟಿಸಿದೆ.

RELATED ARTICLES
- Advertisment -
Google search engine

Most Popular