Wednesday, May 21, 2025
Google search engine

Homeರಾಜ್ಯಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರಿನ ವರೆಗೆ ಎನ್‌ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದರು.

ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಿಲ್ಲ. ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ನಮಗೆ ಚರ್ಚೆಗೆ ಅವಕಾಶ ನೀಡುತ್ತಿದ್ದರು. ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲಾ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular