ಶಿವಮೊಗ್ಗ: ನಿರ್ಭೀತಿಯಿಂದ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದ್ದು, ಯಾವುದೇ ತಪ್ಪಿಲ್ಲದೆ ಕಾರ್ಯನಿರ್ವಹಿಸಲು ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ – ೨೦೨೪ ರ ಕುರಿತು ಸೆಕ್ಟರ್ ಅಧಿಕಾರಿಗಳು ಮತ್ತು ಸೆಕ್ಟರ್ ಪೊಲೀಸ್ ಅಧಿಕಾರಿಗಳು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಸಮಯದಲ್ಲಿ ಸೆಕ್ಟರ್ ಅಧಿಕಾರಿಗಳು/ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು, ಕರ್ತವ್ಯಗಳು ಮತ್ತು ಒಟ್ಟಾರೆ ಕಾರ್ಯವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್‌ಗಳು ತರಬೇತಿಯನ್ನು ನೀಡಲಿದ್ದಾರೆ. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೆಕ್ಟರ್ ಅಧಿಕಾರಿ/ಪೊಲೀಸ್ ವಲಯದ ಅಧಿಕಾರಿಗಳ ಕಾರ್ಯವಿಧಾನವನ್ನು ವಿವರಿಸಿದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಮತ್ತು ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರನಾಯಕ್ ಅವರು ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ, ಸ್ಥಾನಮಾನ, ಸಿದ್ಧತೆ, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ. ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.