ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ: ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುಂಚೆ ಹೋರಾಡಿ, ಗೆದ್ದ ವಿಜಯದ ಪ್ರತೀಕವಾಗಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಪ್ರತಿ ವರ್ಷ ಜರುಗುವ ಕಿತ್ತೂರು ವಿಜಯೋತ್ಸವ ಗುರುವಾರದಿಂದ ಆರಂಭಗೊಂಡಿದೆ.
ಈ ಸಲ ನಡೆಯುತ್ತಿರುವ 201ನೇ ವಿಜಯೋತ್ಸವದ ಕಾರ್ಯಕ್ರಮಗಳಿಗೆ ಮೆರವಣಿಗೆ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಕಿತ್ತೂರಿನ ಚನ್ನಮ್ಮ ವೃತ್ತದಿಂದ ಆರಂಭಗೊಂಡ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕಿತ್ತೂರು ವಿಜಯ ಜ್ಯೋತಿಯನ್ನು ಸ್ವಾಗತಿಸಿಕೊಂಡು ಚಾಲನೆ ನೀಡಿದರು.
ಈ ವೇಳೆ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ಶಾಸಕರಾದ ಬಾಬಾಸಾಬೇಬ ಪಾಟೀಲ, ಮಹಾಂತೇಶ ಕೌಜಲಗಿ, ಆಸೀಫ್ ಸೇಠ, ವಿಶ್ವಾಸ ವೈದ್ಯ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ ಇತರರಿದ್ದರು

ವೃತ್ತದಿಂದ ಕೋಟೆಯವರೆಗೂ ನಡೆದ ಮೆರವಣಿಗೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಜಾನಪದ ಕಲಾತಂಡಗಳು, ವಾದ್ಯವೃಂದಗಳು, ರೂಪಕಗಳು, ಸರ್ಕಾರದ ವಿವಿಧ ಯೋಜನೆಯ ಸ್ತಬ್ಧಚಿತ್ರಗಳು ಭಾಗಿಯಾಗಿದ್ದವು



