Sunday, January 11, 2026
Google search engine

Homeಅಪರಾಧಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ತಾಪುರ: ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಐದು ಜನ ಕಳ್ಳರು ಮನೆಯ ಬೀಗ ಮುರಿದು ಕಳ್ಳತನ ಮಾಡಿ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರ್’ಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್’ಐಗಳಾ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ , ಸಿಬ್ಬಂದಿಗಳಾದ ನಾಗೇಂದ್ರ, ಅಯ್ಯಣ್ಣ ಸೇರಿದಂತೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular