ಚಿಕ್ಕಮಗಳೂರು : ರೈತರ ಜಮೀನಿನಲ್ಲಿ ಬೆಳೆದಿದ್ದ ಸುಮಾರು 10 ಲಕ್ಷ ಮೌಲ್ಯ ಬೆಲೆಬಾಳುವ ಸಾಗುವಾನಿ ಮರಗಳ ಕಳ್ಳತನವಾಗಿದ್ದು ಮೂವರು ಆರೋಪಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ಗ್ರಾಮದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.
ರಾತ್ರಿ ವೇಳೆ ಸಾಗುವಾನಿ ಮರಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳು, ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಕೃತ್ಯ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ
ಆರೋಪಿಗಳಿಂದ 10 ಲಕ್ಷ ಮೌಲ್ಯದ ಸಾಗುವಾನಿ, 5 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು,ಮತ್ತಷ್ಟು ಕಳ್ಳತನ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.