Sunday, May 25, 2025
Google search engine

Homeರಾಜಕೀಯಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿರುವ ಬಗ್ಗೆ ದಾಖಲೆಗಳಿವೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿರುವ ಬಗ್ಗೆ ದಾಖಲೆಗಳಿವೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು:  ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಒಂದು ಮಗುವನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಏನು ಮಾಡಿದ್ದಿರಿ? ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಜಮೀನು ಬರೆಸಿಕೊಳ್ಳಲು ಏನು ಮಾಡಿದ್ದಿರಿ? ಚೆಕ್ ಕೊಟ್ಟಿರುವುದು ಬೇಕಾ? ಚೆಕ್ ಡಿಸಾನರ್ ಮಾಡಿರುವ ದಾಖಲೆ ಇದೆ, ಎಲ್ಲ ಇಟ್ಟಿದ್ದೇವೆ. ನಿನ್ನೆ ಮೊದಲ ಬಾರಿಗೆ ಇದನ್ನ ಹೇಳಿದ್ದೆ. ಅದಕ್ಕೆ ಚರ್ಚೆಗೆ ಕರೆಯುತ್ತಾರೆ. ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ, ಕಂತೆ ಗಟ್ಟಲೇ ದಾಖಲೆ ಇಟ್ಟಿದ್ದೇನೆ. ದಾಖಲೆಗಳು ಬೇಕಾದಷ್ಟಿವೆ ಎಂದು ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದ್ದಾರೆ.

ಈಗ ಶಾಂತಿನಗರ ಹೌಸಿಂಗ್ ಸೊಸೈಟಿ, ಡೂಪ್ಲಿಕೇಟ್ ಸೊಸೈಟಿನ ಒರಿಜಿನಲ್ ಮಾಡಿಕೊಳ್ಳಲಿಲ್ವಾ? ಈ ದೇಶದಲ್ಲಿನ ಸಂಸ್ಥೆಗಳನ್ನು ದುಡ್ಡಿನಲ್ಲಿ ಕೊಂಡುಕೊಂಡು ಯಾವಾಗ ಏನು ಬೇಕಾದ್ರು ಮಾಡುವ ವ್ಯಕ್ತಿ ಡಿಕೆ ಶಿವಕುಮಾರ್ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಒಕ್ಕಲಿಗ ನಾಯಕತ್ವ ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆನಾ ಎಂಬುದಾಗಿ ಪ್ರಶ್ನಿಸಿದ ಕುಮಾರಸ್ವಾಮಿ, ಅವರು (ಡಿಕೆಶಿ) ಸತ್ಯ ಹರಿಶ್ಚಂದ್ರ ಮೊಮ್ಮಗ. ದೊಡ್ಡ ಆಲಹಳ್ಳಿಯಲ್ಲಿ ಹುಟ್ಟುವಾಗ ಸತ್ಯ ಹರಿಶ್ಚಂದ್ರ ಬಂದು ನೀನು ಸತ್ಯನೇ ನುಡಿಬೇಕು ಎಂದು ಅವರಲ್ಲಿ ಹೇಳಿ ಹೋಗಿದ್ದಾರೆ. ನಮಗೆ ಸುಳ್ಳು ಹೇಳಿ ಎಂದು ಹೇಳಿದ್ದಾರೆ  ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

ರಾಹುಲ್ ಗಾಂಧಿಯವರ ಮಂಡ್ಯ ಪ್ರಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬರುವವರನ್ನು ಬೇಡ ಎಂದು ಹೇಳಲಾಗುತ್ತದೆಯಾ? ರಾಜಕೀಯವಾಗಿ ಪ್ರಚಾರ ಮಾಡಲು ಯಾರು ಬೇಕಾದರೂ ಬರಬಹುದು, ಅವರಿಗೆ ಸ್ವಾಗತ. ನಮ್ಮದೇನು ತಕರಾರಿಲ್ಲ, ಬಂದು ಪ್ರಚಾರ ಮಾಡಲಿ. ಅದರಿಂದ ನನಗೇನೂ ಲಾಸ್ ಇಲ್ಲ ಎಂದರು.

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದ ಡಿಕೆ ಶಿವಕುಮಾರ್, ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಿಸ್ಟರ್​ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ ಎಂದಿದ್ದರು.

RELATED ARTICLES
- Advertisment -
Google search engine

Most Popular