Tuesday, February 17, 2026
Google search engine

Homeರಾಜ್ಯಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಈಗಾಗಲೇ ತೈಲ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ಈಗ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್ ದರ ಇಳಿಸ್ತೀರಾ ಎಂಬ ಪ್ರಶ್ನೆ ಉತ್ತರಿಸಿದರು. ಈಗಾಗಲೇ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ನೆರೆಯ ರಾಜ್ಯದವರು ಕಡಿಮೆ ದರ ಇದೆ ಅಂತ ಇಲ್ಲಿಗೆ ಬಂದು ಪೆಟ್ರೋಲ್ ಹಾಕಿಸಿಕೊಳ್ತಿದ್ದಾರೆ. ಈಗ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular