Friday, May 23, 2025
Google search engine

Homeರಾಜಕೀಯಧೈರ್ಯವಾಗಿ ಪ್ರಶ್ನಿಸಿ ಎಂದಿದ್ದರಲ್ಲಿ ತಪ್ಪಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಧೈರ್ಯವಾಗಿ ಪ್ರಶ್ನಿಸಿ ಎಂದಿದ್ದರಲ್ಲಿ ತಪ್ಪಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ ಎಂಬ ಸಾಲುಗಳ ಬದಲಾಗಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಹೊಸ ಘೋಷವಾಕ್ಯ ಬದಲಾವಣೆ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು. ಧೈರ್ಯವಾಗಿ ಪ್ರಶ್ನಿಸಿ ಎಂದಿದ್ದರಲ್ಲಿ ತಪ್ಪಿಲ್ಲ ಎಂದುಸಮರ್ಥಿಸಿಕೊಂಡಿದ್ದಾರೆ.
ಕುತೂಹಲ ಇಲ್ಲ ಅಂದರೆ ಕಲಿಕೆ ಬರಲ್ಲ. ಕಲಿಕೆಯೇ ಬರಲಿಲ್ಲ ಎಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಎಂದರೆ ಪ್ರಶ್ನೆ ಮಾಡಲೇಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗುವುದಿಲ್ಲ. ಪ್ರಶ್ನೆ ಮಾಡಿದರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತದೆ ಎಂದು ಹೇಳಿದರು.

ಇದೇ ವೇಳೆ ಹಿಂದೂ ಪರ ಸಂಘಟನೆಗಳು ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವೇನು ಬೇರೆ ವಿಚಾರ ಹೇಳಿಲ್ಲ. ಜ್ಞಾನಕ್ಕೆ ನಾವು ತಲೆಬಾಗಲೇಬೇಕು. ಗ್ರಂಥಾಲಯಗಳಿಗೆ ಅರಿವು ಕೇಂದ್ರ ಎಂದು ಬದಲಾವಣೆ ಮಾಡಿದ್ದೇವೆ. ಅರಿವೇ ಗುರು ಎಂದು ಬಸವಣ್ಣ ಹೇಳಿದ್ದಾರೆ. ಇದು ತಪ್ಪಾ? ಅರಿವು ಮೂಡಿಸಲು ಏನು ಮಾಡಬೇಕು ಅದನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.


RELATED ARTICLES
- Advertisment -
Google search engine

Most Popular