Tuesday, May 20, 2025
Google search engine

Homeರಾಜ್ಯಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು: ನಟ ಅಭಿಷೇಕ್ ಅಂಬರೀಶ್

ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು: ನಟ ಅಭಿಷೇಕ್ ಅಂಬರೀಶ್

ಮಂಡ್ಯ: ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕಾವೇರಿ ಹೋರಾಟದಲ್ಲಿ ನಟ ಅಭಿಷೇಕ್ ಅಂಬರೀಶ್ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನಾನು ಯುವಕನಾಗಿದ್ದೀನಿ, ಯಾವುದೇ ರಾಜಕೀಯ ದೃಷ್ಟಿಯಿಂದ ಇಲ್ಲಿ ಬಂದಿಲ್ಲ ಎಂದು ಹೇಳಿದರು.

ನಾನು ಚಿಕ್ಕದ್ದಿನಿಂದಾಗಲೂ ಕಾವೇರಿ ಹೋರಾಟ ನೋಡಿ ಬೆಳೆದವನು. ಅಪ್ಪಾಜಿ, ಅಮ್ಮ ಎಲ್ಲರೂ ಕಾವೇರಿ ಪರ ಹೋರಾಟ ಮಾಡಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಕೆಲಸವನ್ನ ಅಮ್ಮ ಮಾಡ್ತಾರೆ ಎಂದರು.

ನಮ್ಮ ನೀರು ಬಿಟ್ರೆ ಮುಂದೆ ಕುಡಿಯುವ ನೀರಿಗೂ ತೊಂದರೆ ಆಗುತ್ತೆ. ನಮ್ಮ ನೀರು, ಜನಕ್ಕೆ ನ್ಯಾಯ ಸಿಗಬೇಕು. ಕನ್ನಡ ಚಿತ್ರರಂಗ ಈ ವಿಚಾರದಲ್ಲಿ ಯಾವಾಗಲೂ ಇದ್ದೇ ಇರುತ್ತೆ. ಶೀಘ್ರದಲ್ಲೇ ಅದಕ್ಕೆ ಒಂದು ವೇದಿಕೆ ಸಿದ್ದವಾಗಲಿದೆ ಎಂದು ತಿಳಿಸಿದರು.

 ನಮ್ಮ ಬಳಿ ನೀರು ಇದ್ರೆ ತಮಿಳುನಾಡಿನವ್ರು ನೀರು ಕೇಳಲಿ. ನಮ್ಮ ಬಳಿಯೇ ನೀರು ಇಲ್ಲದಿದ್ದಾಗ ಅವರಿಗೆ ನೀರು ಕೋಡೊದು ಹೇಗೆ.? ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಬೇಕು. ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular