Wednesday, January 21, 2026
Google search engine

Homeರಾಜಕೀಯಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ : ಸಿಎಂ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ : ಸಿಎಂ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು : ಪ್ರಸ್ತುತ ರಾಜ್ಯದಲ್ಲಿರುವ ಈ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಜನರ ವಿಶ್ವಾಸ ಸಹ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು. ಆದರೆ ಈ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದ ಚರಮ ಸೀಮೆಗೆ ಸರ್ಕಾರ ತಲುಪಿದೆ. ಸಿಎಂ ಕೂಡಾ ಇನ್ನೆಷ್ಟು ದಿನ ಇರ್ತೀನೋ? ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಸದನದಲ್ಲಿ ನರೇಗಾ ಹೆಸರು ಬದಲಾವಣೆ ಚರ್ಚೆ ಕುರಿತು ಮಾತನಾಡಿದ ಅವರು, ವಿಬಿ ಜಿ ರಾಮ್‌ ಜಿ ಕಾಯ್ದೆಯಲ್ಲಿ ವಿರೋಧ ಮಾಡುವ ಅಂಶಗಳೇ ಇಲ್ಲ. ಆದರೂ ಕಾಂಗ್ರೆಸ್‌ನವ್ರು ಏನೋ ಆಗಿದೆ ಅಂತ ಬಾಯಿ ಬಡಿದುಕೊಳ್ತಿದ್ದಾರೆ. ಸದನದಲ್ಲಿ ನಾವೂ ಚರ್ಚೆ ಮಾಡ್ತೇವೆ. ಚರ್ಚೆಗೆ ಹೆದರೋದಿಲ್ಲ. ಗಾಂಧಿ ಹೆಸರು ತೆಗೆದು ರಾಮನ ಹೆಸರು ಇಡಲಾಗಿದೆ. ಗಾಂಧೀಜಿಗೆ ಶ್ರೀರಾಮನೇ ಪ್ರೇರಣೆ ಅಲ್ವೇ ಅಂತ ಪ್ರಶ್ನೆ ಮಾಡಿದರು.

ಇನ್ನೂ ಈ ಸರ್ಕಾರಕ್ಕೆ ನೈತಿಕತೆ ಇಲ್ಲ, ಜನರ ವಿಶ್ವಾಸ ಕಳೆದುಕೊಂಡಿದೆ. ಎಡಪಂಥೀಯರ ಚಾಳಿ ಸಿಎಂಗೆ ಬಂದಿದೆ. ಸರ್ಕಾರ ರಾಜ್ಯಪಾಲರಿಂದ ಏನೇ ಹೇಳಿಸಬಹುದು. ಆದರೆ ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಆ ಜನಾಭಿಪ್ರಾಯವನ್ನ ಈ ಸರ್ಕಾರ ಬದಲಾಯಿಸಲು ಆಗಲ್ಲ. ಸರ್ಕಾರ ಜನರ ವಿಶ್ವಾಸ ಗೆಲ್ಲುವಂಥ ಯಾವ ಕೆಲಸವನ್ನೂ ಕಳೆದ ಎರಡೂವರೆ ವರ್ಷದಲ್ಲಿ ಮಾಡಿಲ್ಲ ಎಂದು ಟೀಕಿಸಿದ್ದಾರೆ.

ಇನ್ನೂ ಅನುದಾನ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 10 ವರ್ಷದಲ್ಲಿ 81,791 ಸಾವಿರ ಕೋಟಿ ಅನುದಾನ ಬಂತು. ಆದರೆ ಮೋದಿ ಅವರ ಕಾಲದಲ್ಲಿ 10 ವರ್ಷಕ್ಕೆ 3,21,974 ಕೋಟಿ ರೂಪಾಯಿ ಅನುದಾನ ಬಂದಿದೆ. ಯಾವುದು ಹೆಚ್ಚು ಅಂತ ಸಿದ್ದರಾಮಯ್ಯ ಹೇಳಲಿ. ಈ ವರ್ಷ ತೆರಿಗೆ ಹಂಚಿಕೆ 57,876 ಕೋಟಿ ಆಗಿದ್ದು, 34,154 ಕೋಟಿ ರೂ. ಬಿಡುಗಡೆ ಆಗಿದೆ. ಸಿದ್ದರಾಮಯ್ಯ ಮೊದಲು ಸುಳ್ಳು ಹೇಳೋದನ್ನ ನಿಲ್ಲಿಸಲಿ ಎಂದರು.

RELATED ARTICLES
- Advertisment -
Google search engine

Most Popular