Tuesday, May 20, 2025
Google search engine

Homeರಾಜ್ಯಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ವದಂತಿ ನಂಬದಿರಿ: ದತ್ತು ಪುತ್ರ ಉಮೇಶ್

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ವದಂತಿ ನಂಬದಿರಿ: ದತ್ತು ಪುತ್ರ ಉಮೇಶ್

ಬೆಂಗಳೂರು: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದ್ದು,  ವದಂತಿ ನಂಬಬೇಡಿ ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಮನವಿ ಮಾಡಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಡಾ.ರವೀಂದ್ರ ಮೆಹ್ತಾ ವೈದ್ಯರ ತಂಡ ತಿಮ್ಮಕ್ಕಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಸಾಲುಮರದ ತಿಮ್ಮಕ್ಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಈ ಬಗ್ಗೆ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.

ಇತ್ತೀಚೆನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಜನರಿಗೆ ಅದೇನು ಆತುರವೋ ಏನೋಮ ಬದುಕಿದ್ದವರನ್ನು ಮೃತಪಟ್ಟಿದ್ದಾರೆ ಎಂದು ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಮೇಶ್ ಅವರ ಈ ಪೋಸ್ಟ್​ಗೆ ಅನೇಕರು ಪ್ರತಿಕ್ರಿಯಿಸಿ, ಹೀಗೆ ಸುಳ್ಳು ಸುಳ್ಳು ಪೋಸ್ಟ್ ಹಾಕುವುದಕ್ಕೂ ಮೊದಲು ಹತ್ತು ಸಲ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಎಂದಿದ್ದಾರೆ.

RELATED ARTICLES
- Advertisment -
Google search engine

Most Popular