Wednesday, May 21, 2025
Google search engine

Homeರಾಜ್ಯ14 ಸೈಟ್ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಆರೋಪ

14 ಸೈಟ್ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಆರೋಪ

ನವದೆಹಲಿ: ೧೪ ಸೈಟ್ ಪ್ರಕರಣಕ್ಕಿಂತ ದೊಡ್ಡ ಪ್ರಕರಣ. ಚುನಾವಣಾ ಸಾಲಕ್ಕಾಗಿ ಸೈಟು ಮಾರಾಟ ಮಾಡಿದ್ದರಲ್ಲ ಅದು ಎಲ್ಲಿಂದ ಬಂತು ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈಸೂರಿನ ಹಿನಕಲ್ ಗ್ರಾಮ ಪಂಚಾಯತ್‌ನಲ್ಲಿ ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿ ಡಿನೋಟಿಫಿಕೇಷನ್ ಮಾಡಿಸಿಕೊಂಡು ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ. ಒಟ್ಟು ೧೮ ಮಂದಿ ಆರೋಪಿಗಳಿದ್ದಾರೆ. ಕೆಳಹಂತದ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತೀರ್ಪು ನೀಡಿತ್ತು. ಅಷ್ಟೇ ಅಲ್ಲದೇ ತನಿಖೆ ನಡೆಸುವಂತೆ ಆದೇಶಿಸಿತ್ತು ಎಂದು ಹೇಳಿದರು.

ಈ ಆದೇಶವನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯನವರಿಗೆ ರಿಲೀಫ್ ಸಿಕ್ಕಿತ್ತು. ಈ ರಿಲೀಫ್ ಕೊಟ್ಟವರು ನ್ಯಾ. ಮೈಕೆಲ್ ಡಿ ಕುನ್ಹಾ. ನ್ಯಾಯಮೂರ್ತಿಗಳ ಆದೇಶದ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈ ನ್ಯಾಯಧೀಶರು ಈಗ ಕರ್ನಾಟಕದಲ್ಲಿನ ಕೋವಿಡ್ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular