ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ದಂಪತಿ ಸೇರಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲ್ಲೂಕಿನ ಗಿರಿಯಾರಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ದಂಪತಿಗಳು ಹಿನ್ನೀರಿನ ಪ್ರದೇಶದಲ್ಲಿ ದೋಣಿ ವಿಹಾರ ಸೈಲಿಂಗ್ ಮಾಡುವ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ ಹತ್ತಿರದಲ್ಲೇ ಮೀನು ಹಿಡಿಯಲು ಹೋಗಿದ್ದ ಮತ್ತೊಬ್ಬ ಯುವಕನೂ ಸಹ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಭೇಟಿ ನೀಡಿದ್ದು, ಮೃತದೇಹಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.



