Tuesday, July 14, 2026
Google search engine

Homeರಾಜ್ಯಸುದ್ದಿಜಾಲವಡೆಯನಪುರದಲ್ಲಿ ಮತ್ತೆ ಹುಲಿ ದಾಳಿ: ಹಗಲು ಹೊತ್ತಲ್ಲೇ ಹಸು ಬಲಿ, ಗ್ರಾಮಸ್ಥರಲ್ಲಿ ಆತಂಕ

ವಡೆಯನಪುರದಲ್ಲಿ ಮತ್ತೆ ಹುಲಿ ದಾಳಿ: ಹಗಲು ಹೊತ್ತಲ್ಲೇ ಹಸು ಬಲಿ, ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡೆಯನಪುರ ಗ್ರಾಮದಲ್ಲಿ ಮತ್ತೆ ಹುಲಿ ದಾಳಿ ನಡೆಸಿ ರೈತನೊಬ್ಬನ ಹಸುವನ್ನು ಕೊಂದು ಹಾಕಿರುವ ಘಟನೆ ಸೋಮವಾರ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಗ್ರಾಮದ ಪುಟ್ಟಶೆಟ್ಟಿ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದ ವೇಳೆ ಹಾಡುಹಗಲೇ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಹುಲಿ ಪದೇಪದೇ ದಾಳಿ ನಡೆಸುತ್ತಿದ್ದು, ಜಾನುವಾರುಗಳನ್ನು ಬಲಿ ಪಡೆಯುತ್ತಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಹುಲಿ ನಿರಂತರವಾಗಿ ಗ್ರಾಮದ ಸುತ್ತಮುತ್ತ ಸಂಚರಿಸುತ್ತಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗಳು ಸಹ ಅಸ್ತವ್ಯಸ್ತಗೊಂಡಿದ್ದು, ಗ್ರಾಮಸ್ಥರು ಜೀವಭಯದಲ್ಲೇ ದಿನ ಕಳೆಯುತ್ತಿದ್ದಾರೆ.

ಪದೇಪದೇ ಹುಲಿ ದಾಳಿ ನಡೆದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿಯನ್ನು ಕೂಡಲೇ ಸೆರೆ ಹಿಡಿದು ಗ್ರಾಮಸ್ಥರ ಆತಂಕ ನಿವಾರಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಅಲ್ಲದೆ, ದಾಳಿಯಲ್ಲಿ ಮೃತಪಟ್ಟ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಸಹ ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular