Wednesday, May 21, 2025
Google search engine

Homeರಾಜ್ಯಸುದ್ದಿಜಾಲಇಂದು ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಚಾಲನೆ

ಇಂದು ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಚಾಲನೆ

ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ ೪ ರಿಂದ ೭ ರವರೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ ನಡೆಯಲಿದ್ದು, ಅಕ್ಟೋಬರ್ ೪ ರಂದು ನಡೆಯುವ ಕಾರ್ಯಕ್ರಮದ ವಿವರ ಹೀಗಿದೆ.

ಮಧ್ಯಾಹ್ನ ೧೨:೩೦ಕ್ಕೆ ಶ್ರೀರಂಗಪಟ್ಟಣದ ಕಿರಂಗೂರಿನ ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆ ನಡೆಯಲಿದೆ. ಮಧ್ಯಾಹ್ನ ೨:೩೦ ರಿಂದ ೩ ರವರೆಗೆ ಕಿರಗೂರಿನ ಬನ್ನಿ ಮಂಟಪದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಮಹೇಂದ್ರ (ಅಂಬಾರಿ ಆನೆ) ಹಿರಣ್ಯ ಮತ್ತು ಲಕ್ಷ್ಮಿ (ಆನೆಗಳು) ಇರಲಿದೆ.

ಸಂಜೆ ೬೦೦ ಗಂಟೆಗೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದ ಶ್ರೀರಂಗ ವೇದಿಕೆಯಲ್ಲಿ ದಸರಾ ಮತ್ತು ವೇದಿಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾತ್ರಿ ೮ ಗಂಟೆಗೆ ಸಂಗೀತ ನಿರ್ದೇಶಕ ಹಾಗೂ ಗಾಯಕರಾದ ವಾಸುಕಿ ವೈಭವ್ ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

RELATED ARTICLES
- Advertisment -
Google search engine

Most Popular