Tuesday, February 17, 2026
Google search engine

Homeಕ್ರೀಡೆಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ

ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ


ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ೨೦ ವಿಶ್ವಕಪ್ ಪಂದ್ಯ ಇಂದು ಭಾನುವಾರ ನಡೆಯಲಿದೆ. ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ೪ ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು ಲೋನ್ ವುಲ್ಫ್ ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಸ್ಟೇಡಿಯಂಗೆ ನ್ಯೂಯಾರ್ಕ್ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ ತಂಡ: ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

RELATED ARTICLES
- Advertisment -
Google search engine

Most Popular