Tuesday, October 7, 2025
Google search engine

Homeರಾಜ್ಯಸುದ್ದಿಜಾಲಇಂದು ವಾಲ್ಮೀಕಿ ಜಯಂತಿ : ಐವರು ಸಾಧಕರಿಗೆ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

ಇಂದು ವಾಲ್ಮೀಕಿ ಜಯಂತಿ : ಐವರು ಸಾಧಕರಿಗೆ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಮನೆಮಾಡಿದ್ದು, ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸರ್ಕಾರ ಗೌರವಿಸಲಿದೆ.

ರಾಜ್ಯ ಸರ್ಕಾರವು ಐವರು ಸಾಧಕರಿಗೆ 2025 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಿದೆ.2025ನೇ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲು ಅ.03 ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಐವರ ಹೆಸರನ್ನು ನಿರ್ಣಯಿಸಲಾಗಿದೆ. 2025ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲು ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ.

ನಾಗರಾಜು ಗಾಣದ ಹುಣಸೆ,ಪಿ.ತಿಪ್ಪೇಸ್ವಾಮಿ, ಜೆ.ಕೆ.ಮುತ್ತಮ್ಮ,ಮಳಸಿದ್ದ ಲಕ್ಷ್ಮಣ ನಾಯಕೋಡಿ ಹಾಗೂ ಕೆ.ಉಚ್ಚಂಗಪ್ಪ ಹೆಸರನ್ನು ಆಯ್ಕೆ ಮಾಡಲಾಗಿದ್ದು, ಎಲ್ಲಾ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಗೌರವ ಸಲ್ಲಿಸಿದ್ದಾರೆ.

ಮಹರ್ಷಿ ವಾಲ್ಮೀಕಿಗಳು ಜನಿಸಿದ ದಿನವನ್ನೇ ವಾಲ್ಮೀಕಿ ಜಯಂತಿ ಎಂದು ಆಚರಿಸಲಾಗುತ್ತದೆ. ಪ್ರತಿವರ್ಷ ವಾಲ್ಮೀಕಿ ಜಯಂತಿಯನ್ನು ಅಶ್ವಿನಿ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ.ಶ್ರೀರಾಮನ ಜೀವನ ಚರಿತ್ರೆಯನ್ನು ವಿವರಿಸುವ ರಾಮಾಯಣವನ್ನು ಬರೆದಂತಹ ಮಹಾನ್‌ ಮಹರ್ಷಿ ವಾಲ್ಮೀಕಿಯವರ ಜನ್ಮ ದಿನವಾಗಿ ವಾಲ್ಮೀಕಿ ಜಯಂತಿಯನ್ನು ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular