Sunday, May 25, 2025
Google search engine

Homeರಾಜ್ಯಎಲ್ಲಾ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಜಾರಿ

ಎಲ್ಲಾ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಜಾರಿ

ಎಲ್ಲಾ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದ್ದು,ಇಂದಿನಿಂದಲೇ ಜಾರಿಗೆ ಬರಲಿದೆ.

ಸಾಮಾನ್ಯವಾಗಿ ಟೋಲ್​ ಶುಲ್ಕ ಪ್ರತಿ ವರ್ಷ ಹೆಚ್ಚಾಗುತ್ತದೆ. ಇದರಂತೆ ಏಪ್ರಿಲ್​ 1ರಿಂದ ಪರಿಷ್ಕೃತ ಶುಲ್ಕ ಜಾರಿಯಾಗಬೇಕಿತ್ತು, ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಶುಲ್ಕ ಜಾರಿಗೆ ತಡವಾಗಿತ್ತು.

ರಾಷ್ಟ್ರೀಯ ಹೆದ್ದಾರಿ ಜಾಲದಲ್ಲಿ ಸರಿಸುಮಾರು 855 ಟೋಲ್ ಪ್ಲಾಜಾಗಳಿವೆ. ಇವುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ಕಾಯ್ದೆ, 2008ಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ.

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಹೊಸ ದರಗಳು ಜೂನ್​ 3, 2024ರಿಂದ ಅನ್ವಯವಾಗುತ್ತವೆ, ಟೋಲ್​ ತೆರಿಗೆ ಎಂಬುದು ಕೆಲವು ಅಂತಾರಾಜ್ಯ ಎಕ್ಸ್​ಪ್ರೆಸ್​ವೇಗಳು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ದಾಟುವಾಗ ಚಾಲಕರು ಪಾವತಿಸಬೇಕಾದ ಶುಲ್ಕ. ಇವುಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಬರುತ್ತವೆ.

ದ್ವಿಚಕ್ರ ವಾಹನ ಸವಾರರಿಗೆ ಟೋಲ್​ ಶುಲ್ಕದಿಂದ ರಿಯಾಯಿತಿ ನೀಡಲಾಗಿದೆ.

RELATED ARTICLES
- Advertisment -
Google search engine

Most Popular