Monday, February 16, 2026
Google search engine

Homeಸ್ಥಳೀಯಮೈಸೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಯಿ

ಮೈಸೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಯಿ

ಮೈಸೂರು: ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಚಾಮುಂಡಿಪುರಂ ಬಡಾವಣೆಯಲ್ಲಿ 4 ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ.

ಚಾಮುಂಡಿಬೆಟ್ಟದ ಮೆಟ್ಟಿಲು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಮುರಿದುಬಿದ್ದಿದೆ. ಭಾರಿ ಮಳೆ ಗಾಳಿಗೆ ವಿದ್ಯುತ್ ಕಂಬಗಳು ಕೂಡ ಧರೆಗುರುಳಿವೆ.

ಭಾರಿ ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಯಾರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮೈಸೂರಿನ ಬಹುತೇಕ ಕಡೆಗಳಲ್ಲಿ‌ ಇಂಥದ್ದೇ ಅನಾಹುತ ಸಂಭವಿಸಿದೆ.

RELATED ARTICLES
- Advertisment -
Google search engine

Most Popular