Sunday, February 15, 2026
Google search engine

Homeರಾಜ್ಯಸುದ್ದಿಜಾಲಜು.11 ರಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪ್ರವಾಸ ಕಾರ್ಯಕ್ರಮ

ಜು.11 ರಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜು.11 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜು.11 ರಂದು ಬೆಳಿಗ್ಗೆ 9.15 ಕ್ಕೆ ಜಿಂದಾಲ್ ವಿಮಾನ ನಿಲ್ದಾಣದಿಂದ ರಸ್ತೆಯ ಮೂಲಕ ಆಗಮಿಸಿ, ಬೆಳಿಗ್ಗೆ 10 ಗಂಟೆಯಿಂದ 10.45 ರ ವರೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು.

ಬಳಿಕ ಬೆಳಿಗ್ಗೆ 11 ಗಂಟೆಯಿಂದ 12.30 ರ ವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ನಂತರ 12.30 ರಿಂದ 12.45 ರ ವರೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 01.45 ಗಂಟೆಯಿಂದ 03 ಗಂಟೆಯವರೆಗೆ ಬಳ್ಳಾರಿ ಥರ್ಮಲ್ ಪವರ್ ಸ್ಟೇಷನ್ ಯುನಿಟ್‍ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.

ಬಳಿಕ ಮಧ್ಯಾಹ್ನ 03.30 ಕ್ಕೆ ಜಿಂದಾಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular