ಕುಣಿಗಲ್: ಟ್ರ್ಯಾಕ್ಟರ್ ಬಳಸಿ ತಮ್ಮ ಜಮೀನು ಉಳಿಮೆ ಮಾಡುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಪಕಕ್ಕೆ ಉರುಳಿ ಬಿದ್ದ ಕಾರಣ ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕೆಂಪಸಾಗರ ಗ್ರಾಮದಲ್ಲಿ ಶನಿವಾರ ಮುಂಜಾನೆ (ಡಿ.9 ರಂದು) ನಡೆದಿದೆ.
ಕೆಂಪಸಾಗರ ಗ್ರಾಮದ ಮೋಹನ್ ಕುಮಾರ್ (35 ) ಮೃತ ಅರಣ್ಯ ವೀಕ್ಷಕ.
ಮೋಹನ್ ಕುಮಾರ್ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಪಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದ್ದು ಉರುಳಿದ ಸಂದರ್ಭದಲ್ಲಿ ಮೋಹನ್ ಕುಮಾರ್ ಅವರ ತಲೆ ನೀಲಗಿರಿ ಮರಕ್ಕೆ ತಾಗಿ ಮೋಹನ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕುಣಿಗಲ್ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗದ ಮಧ್ಯ ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ರಾಜ್ಯ ಅರಣ್ಯ ಮತ್ತು ವನ್ಯ ಜೀವಿ ಸಂರಕ್ಷಣಾ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿ ಗಣನೀಯ ಸೇವೆಯನ್ನು ಪರಿಗಣಿಸಿ 2020 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಿ ರಾಜ್ಯ ಸರ್ಕಾರ ಮೋಹನ್ ಕುಮಾರ್ ಅವರನ್ನು ಗೌರವಿಸಿತ್ತು.