ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 35ನೇ ರಾಷ್ಟ್ರಮಟ್ಟದ ಜೂನಿಯರ್ ತ್ರೋಬಾಲ್ ಚಾಂಪಿಯನ್‌ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಮ್ಮೆಂಬಳ ಸಮೀಪದ ಕುಂಟುಪುಣಿ ವಿದ್ಯಾ ಮತ್ತು ಜಯಪ್ರಕಾಶ್ ಶೆಟ್ಟಿ ಇವರ ಮಗಳು ತ್ರಿಶಾ ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇದರ ಜೊತೆಗೆ ಇವರು ‘ಉತ್ತಮ ಆಟಗಾರ್ತಿ’ ಪ್ರಶಸ್ತಿಯನ್ನು ಕೂಡ ಪಡೆದಿದ್ದಾರೆ. ಇವರು ಶ್ರೀ ರಾಮ ಭಜನಾ ಮಂದಿರದ ಸಕ್ರಿಯ ಕಾರ್ಯಕರ್ತೆಯಾಗಿದ್ದಾರೆ. ಊರಿಗೆ ಹೆಮ್ಮೆಯನ್ನು ತಂದುಕೊಟ್ಟ ಇವರು ಇನ್ನೂ ಉನ್ನತ ಮಟ್ಟದಲ್ಲಿ ಸಾಧನೆಯನ್ನು ಮಾಡಲಿ ಎಂದು ಆಶಿಸುತ್ತೇವೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ. ಇವರಿಗೆ ಕೋಚ್ ಸಿಯಾಕ್ ಮತ್ತು ಧೀರಜ್ ತರಬೇತಿ ನೀಡಿದ್ದರು.
ವರದಿ: ಶಂಶೀರ್ ಬುಡೋಳಿ



