Wednesday, May 21, 2025
Google search engine

HomeUncategorizedರಾಷ್ಟ್ರೀಯಪುಣೆಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್‌: ನಾಲ್ವರು ಸಜೀವ ದಹನ

ಪುಣೆಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್‌: ನಾಲ್ವರು ಸಜೀವ ದಹನ

ಮಹಾರಾಷ್ಟ್ರ:‌ ಪುಣೆಯ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್‌ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಸೋಮವಾರ ರಾತ್ರಿ(ಅ.16 ರಂದು) ನಡೆದಿದೆ.

ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ನವಲೆ ಸೇತುವೆಯ ಸಮೀಪದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ ಎಂದು ಸಿನ್ಹಗಡ್ ರೋಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಅಭಯ್ ಮಹಾಜನ್ ತಿಳಿಸಿದ್ದಾರೆ.

ವೇಗವಾಗಿ ಬಂದ ಟ್ರಕ್‌ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಪರಿಣಾಮ ನಾಲ್ವರು ಸಜೀವ ದಹನಗೊಂಡಿದ್ದು, ಇನ್ನಿಬ್ಬರಿಗೆ ಸುಟ್ಟಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದಾರೆ. ಅವರು ಬರುವ ಮುನ್ನ ಸ್ಥಳೀಯರು ಟ್ರಕ್‌ ನಲ್ಲಿದ್ದ ಜನರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಆದರೆ ಬೆಂಕಿ ವಿಪರೀತವಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ.

RELATED ARTICLES
- Advertisment -
Google search engine

Most Popular