Tuesday, May 20, 2025
Google search engine

Homeರಾಜ್ಯಪಣಂಬೂರು ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ

ಪಣಂಬೂರು ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ

ಪಣಂಬೂರು: ಬೆಂಗಳೂರು ಮೂಲದ ಇಬ್ಬರು ಪಣಂಬೂರು ಕಡಲ ತೀರದಲ್ಲಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಆ.19ರ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು. ಇವರಿಬ್ಬರು ಸಂಬಂಧದಲ್ಲಿ ಅತ್ತಿಗೆ ಹಾಗೂ ಭಾವ ಎಂದು ತಿಳಿದು ಬಂದಿದೆ.

ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೊಲೀಸರಿಗೆ ಪ್ರಾಥಮಿಕ ಮಾಹಿತಿ ದೊರಕಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಬರುತ್ತಿದ್ದಾರೆ ಎಂದು ವರದಿಯಾಗಿದೆ. ಇಬ್ಬರ ಶವಗಳನ್ನು ಮೇಲೆತ್ತಿದ್ದು, ಶವಾಗಾರದಲ್ಲಿ ಇಡಲಾಗಿದೆ.

RELATED ARTICLES
- Advertisment -
Google search engine

Most Popular