Monday, November 24, 2025
Google search engine

Homeಅಪರಾಧವಂದೇ ಭಾರತ್‌ಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು

ವಂದೇ ಭಾರತ್‌ಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು

ಬೆಂಗಳೂರು: ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ  ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ಈ ದಾರುಣ ಘಟನೆ ನಡೆದಿದೆ.

ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು  ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಪಿಜಿಗೆ ಟ್ರ್ಯಾಕ್‌ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಹೈಸ್ಪೀಡ್‌ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ UDR (ಅಸಹಜ ಸಾವಿನ ವರದಿ) ಅಡಿಯಲ್ಲಿ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಮೃತದೇಹಗಳನ್ನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

RELATED ARTICLES
- Advertisment -
Google search engine

Most Popular