ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ ಉರುಳಾಗುತ್ತಿದ್ದಂತೆ ಬುರುಡೆ ಗ್ಯಾಂಗ್ ಯೂಟರ್ನ್ ಹೊಡೆದಿದೆ.
ತಾವೇ ಹೋರಾಟ ಮಾಡಿ ಹಾಕಿಸಿದ್ದ ಕೇಸಿನ ರದ್ದು ಕೋರಿ ತಿಮರೋಡಿ, ಜಯಂತ್, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ ಹೈಕೋರ್ಟ್ಗೆ ಪ್ರಕರಣ ರದ್ದು ಕೋರಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸುಮಾರು 100 ಗಂಟೆಗೂ ಹೆಚ್ಚಿನ ಕಾಲ ನಮ್ಮನ್ನು ವಿಚಾರಣೆ ಮಾಡಿದ್ದಾರೆ. ದೂರಿಗೆ ಸಂಬಂಧಿಸಿದಂತೆ 164 ಹೇಳಿಕೆಗಳಲ್ಲಿ ತಮ್ಮ ವಿರುದ್ಧ ಆರೋಪಗಳಿಲ್ಲ. ಆದರೂ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಚಿನ್ನಯ್ಯ ದೂರಿನ ನಂತರ ಎಸ್‌ಐಟಿ ಎಫ್‌ಐಆರ್‌ನಲ್ಲಿ ಹೆಚ್ಚುವರಿ ಸೆಕ್ಷನ್ಸ್ ಸೇರಿಸಿತ್ತು. ಬಿಎನ್‌ಎಸ್ ಸೆಕ್ಷನ್ 336 (ನಕಲಿ ದಾಖಲೆ), ಎಲೆಕ್ಟ್ರಾನಿಕ್ಸ್ ದಾಖಲೆ ವಂಚನೆ ಉದ್ದೇಶಕ್ಕೆ ಬಳಕೆ, 211(ಎ) (ಉದ್ದೇಶ ಪೂರ್ವಕ ಮಾಹಿತಿ ನೀಡಲು ವಿಫಲ, 230 (ಸುಳ್ಳು ಸಾಕ್ಷ್ಯ ಸೃಷ್ಟಿ)229 (ಉದ್ದೇಶ ಪೂರ್ವಕ ಸುಳ್ಳು ಸಾಕ್ಷ್ಯ ಸೃಷ್ಟಿ, 227 (ಉದ್ದೇ ಪೂರ್ವಕ ಸುಳ್ಳು ಹೇಳಿಕೆ), 248 (ಸುಳ್ಳು ಕ್ರಿಮಿನಲ್ ಮೊಕದ್ದಮೆ) ಸೆಕ್ಷನ್‌ಗಳನ್ನು ಸೇರಿಸಲಾಗಿತ್ತು. ಆ ಬಳಿಕ ದೂರುದಾರ ಚಿನ್ನಯ್ಯನ ಬಂಧನವಾಗಿತ್ತು.
ಅಕ್ಟೋಬರ್ 24 ರಂದು ವಿಚಾರಣೆಗೆ ಬರುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಈ ವಿಚಾರಣೆಗೆ ಹಾಜರಾದಲ್ಲಿ ಬಂಧನ ಸಾಧ್ಯತೆ ಭಯದಿಂದ ಇದೀಗ ಬುರುಡೆ ಗ್ಯಾಂಗ್ ಪ್ರಕರಣವನ್ನೇ ರದ್ದು ಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ.



