ಬೆಂಗಳೂರು: 2026ರ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ತನಿಶಾ ಕಾರ್ತಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೃಜನ್ ದ್ವಿತೀಯ ಹಾಗೂ ನಿನಾದ್ ತೃತೀಯ ಸ್ಥಾನ ಗಳಿಸಿದ್ದಾರೆ.
ಕೃಷಿ ವಿಭಾಗದಲ್ಲಿ ಆರ್.ವಿ ಪಿಯು ಕಾಲೇಜಿನ ನಿನಾದ್ ಮೊದಲ ಸ್ಥಾನ ಪಡೆದರೆ, ಧಾರವಾಡದ ಅರ್ಜುನ್ ಸೈನ್ಸ್ ಕಾಲೇಜಿನ ಅನ್ಮೊಲ್ ದ್ವಿತೀಯ ಹಾಗೂ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಸಮಯ್ ಎ.ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ಯೋಗ ಮತ್ತು ನ್ಯಾಚುರೋಪಥಿ ವಿಭಾಗದಲ್ಲಿ ಬೆಂಗಳೂರಿನ ನಯನ ಗೋಪಿ ಪ್ರಥಮ, ದಾವಣಗೆರೆಯ ಅಮೂಲ್ಯ ದ್ವಿತೀಯ ಹಾಗೂ ಸುಚಿತಾ ತೃತೀಯ ಸ್ಥಾನ ಗಳಿಸಿದ್ದಾರೆ. ಇದೇ ಕ್ರಮ ಡಿ-ಫಾರ್ಮ ವಿಭಾಗದಲ್ಲೂ ಮುಂದುವರಿದಿದೆ.
ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 1,86,099 ವಿದ್ಯಾರ್ಥಿನಿಯರು ಹಾಗೂ 1,44,380 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3.30 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿದೆ.



