Monday, May 4, 2026
Google search engine

Homeರಾಜಕೀಯಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಮುನ್ನಡೆ; ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಮುನ್ನಡೆ; ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆರಂಭಿಕ ಸುತ್ತಿನಿಂದಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಹರ್ಷೋದ್ಗಾರ ಮೂಡಿದೆ.

ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದು, ಕಾಂಗ್ರೆಸ್ ಬಾವುಟಗಳನ್ನು ಹಿಡಿದು, ಜೈಕಾರಗಳನ್ನು ಕೂಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಭಾವ ಚಿತ್ರ ಹಿಡಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸತತ ಹಿನ್ನಡೆ ಅನುಭವಿಸುತ್ತಿದ್ದಾರೆ.


RELATED ARTICLES
- Advertisment -
Google search engine

Most Popular