Monday, May 26, 2025
Google search engine

Homeರಾಜ್ಯಸುದ್ದಿಜಾಲಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಆರಂಭ : ಸದುಪಯೋಗಕ್ಕೆ ಮನವಿ

ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಆರಂಭ : ಸದುಪಯೋಗಕ್ಕೆ ಮನವಿ

ಚಾಮರಾಜನಗರ: ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಲುವಾಗಿ ಚಾಮರಾಜನಗರ ಮತ್ತು ಗುಂಡ್ಲುಪೇಟೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

೨೦೨೪ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ೧೨ ಸಾವಿರ ರೂ. ಬೆಂಬಲ ಬೆಲೆಯನ್ನು ಘೋಷಿಸಲಾಗಿದೆ. ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ೧,೫೦೦ ರೂ. ಪೊರೀತ್ಸಾಹ ಧನ ನಿಗದಿಪಡಿಸಲಾಗಿದೆ. ಒಟ್ಟಾರೆ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ೧೩,೫೦೦ ರೂ. ರಂತೆ ಖರೀದಿಸಲಾಗುವುದು. ಉಂಡೆ ಕೊಬ್ಬರಿ ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಮತ್ತು ರಾಜ್ಯದ ವತಿಯಿಂದ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಪ್ರಸಕ್ತ ಮಾರ್ಚ್ ಮಾಹೆಯ ಮೊದಲನೇ ವಾರದಿಂದ ಮೇ ಕೊನೆಯ ವಾರದವರೆಗೆ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ರೈತ ಬಾಂಧವರು ಖರೀದಿ ಕೇಂದ್ರಗಳಲ್ಲಿ ಫ್ರೂಟ್ಸ್ ಎಫ್‌ಐಡಿ ನೀಡಿ ನೋಂದಾಯಿಸಿಕೊಂಡು ಯೋಜನೆಯ ಉಪಯೋಗ ಪಡೆಯಬಹುದು.

ಪ್ರತಿ ಎಕರೆಗೆ ೬ ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ ೧೫ ಕ್ವಿಂಟಾಲ್ ಮಾತ್ರ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲು ಪ್ರಮಾಣ ನಿಗದಿ ಪಡಿಸಲಾಗಿದೆ. ಖರೀದಿ ಕೇಂದ್ರಕ್ಕೆ ಎಫ್.ಎ.ಕ್ಯೂ. ಉತ್ತಮ ಗುಣಮಟ್ಟದ ಕೊಬ್ಬರಿಯನ್ನು ತರಬೇಕು. ರೈತರಿಂದ ಖರೀದಿಸಲಾದ ಉಂಡೆ ಕೊಬ್ಬರಿಯ ಮೌಲ್ಯವನ್ನು ಡಿ.ಬಿ.ಟಿ ಮೂಲಕ ನೇರವಾಗಿ ಆಧಾರ್ ಜೋಡಣೆಯಾದ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಆದ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಜಿಲ್ಲೆಯ ರೈತಬಾಂಧವರು ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ ಅನುಕೂಲವನ್ನು ಸದುಪಯೋಗಪಡಿಸಿಕೊಳ್ಳಬೇಕು. ವರ್ತಕರು ಮತ್ತು ಮಧ್ಯವರ್ತಿಗಳ ಮುಖಾಂತರ ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಮಾರಾಟ ಮಾಡದೆ ರೈತರು ಖುದ್ದಾಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ದೂ.ಸಂ ೮೦೨೨೨೫೩೯೬೮ ಅಥವಾ ಉಚಿತ ದೂ.ಸಂ ೧೮೦೦-೪೨೫-೧೫೫೨ ಗೆ ಸಂಪರ್ಕಿಸಬಹುದು. ಅಲ್ಲದೇ ಮೈಸೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರು ಮೊ.ಸಂ ೮೦೭೩೩೪೮೦೪೩, ಚಾಮರಾಜನಗರ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಮೊ.ಸಂ ೮೭೬೨೮೯೮೩೯೪, ಚಾಮರಾಜನಗರ ಎ.ಪಿ.ಎಂ.ಸಿ. ಕಾರ್ಯದರ್ಶಿ ಮೊ.ಸಂ ೮೭೬೨೮೯೮೩೯೪, ಗುಂಡ್ಲುಪೇಟೆ ಎ.ಪಿ.ಎಂ.ಸಿ. ಕಾರ್ಯದರ್ಶಿ ಮೊ.ಸಂ ೯೮೪೪೨೧೧೮೮೫, ಚಾಮರಾಜನಗರ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಮೊ.ಸಂ ೯೪೪೮೯೯೯೨೨೧ ಸಂಪರ್ಕಿಸುವಂತೆ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular