Wednesday, May 21, 2025
Google search engine

Homeಅಪರಾಧಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಚಿರತೆ ಸಾವು

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಚಿರತೆ ಸಾವು

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ನಡೆದಿದೆ.

ಬಾಚನಹಳ್ಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನೆನ್ನೆ ಸಂಜೆ ರಸ್ತೆ ದಾಟುವ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂರು ವರ್ಷದ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಹೆದ್ದಾರಿಯಲ್ಲಿ ಚಿರತೆ ಬಿದ್ದಿರುವುದನ್ನ ಕಂಡು ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಚಿರತೆ ಮೃತಪಟ್ಟಿರುವು ಖಾತರಿಯಾಗಿದೆ.

ಚಿರತೆ ಕಳೆಬರಹವನ್ನು ಉಪ ವಲಯ ಅರಣ್ಯ ಇಲಾಖೆ ಕಚೇರಿ ಆವರಣಕ್ಕೆ ರವಾನೆ ಮಾಡಲಾಗಿದೆ.

ಮೇಲಾಧಿಕಾರಿಗಳ ಮಾರ್ಗದರ್ಶನ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಚಿರತೆ ಸಾವಿನ ಕಾರಣದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ಮಹದೇವು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular