ನವದೆಹಲಿ: ನಾಗರಿಕ ಸೇವಾ ಪರೀಕ್ಷೆ (UPSC)-೨೦೨೩ ರ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ೧,೦೧೬ ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಐಎಎಸ್ ವಿಭಾಗದಲ್ಲಿ ಆದಿತ್ಯ ಶ್ರೀವಾಸ್ತವ್ ದೇಶಕ್ಕೆ ಮೊದಲ ೧ ಸ್ಥಾನ ಪಡೆದುಕೊಂಡಿದ್ದಾರೆ.
ಐಎಎಸ್ ೧೮೦, ಐಎಫ್‌ಎಸ್ ೩೭, ಐಪಿಎಸ್ ವಿಭಾಗದಲ್ಲಿ ೨೦೦ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರೂಪ್ ಎ ೬೧೩, ಗ್ರೂಪ್ ಬಿ ೧೧೩ ಮಂದಿ ಆಯ್ಕೆಯಾಗಿದ್ದಾರೆ. ಈ ವರ್ಷ ಆದಿತ್ಯ ಶ್ರೀವಾಸ್ತವ ಪ್ರಥಮ ಸ್ಥಾನ ಪಡೆದರೆ, ಅನಿಮೇಶ್ ಪ್ರಧಾನ್ ದ್ವಿತೀಯ, ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.