Monday, November 3, 2025
Google search engine

Homeಕಲೆ-ಸಾಹಿತ್ಯಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವೀಣೆ ತಯಾರಕ, ಶತಾಯುಷಿ ದೊಡ್ಡಬಳ್ಳಾಪುರ ತಾಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ (103) ರವಿವಾರ ತಡರಾತ್ರಿ ನಿಧನರಾದರು.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

‘ವೀಣೆ ಬ್ರಹ್ಮ’ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು.

ಸಚಿವ ಶಿವರಾಜ ತಂಗಡಗಿ ಸಂತಾಪ

70ನೇ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬ್ರಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿ ಪುರದ ನಿವಾಸಿಯಾಗಿದ್ದ ಅವರು ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು. ಅವರಿಂದ ನೂರಾರು ಜನ ವೀಣೆ ತಯಾರಿಸುವುದನ್ನ ಕಲಿತಿದ್ದಾರೆ.

103 ವರ್ಷದ ಪೆನ್ನ ಹೋಬಳಯ್ಯ ಅವರ ಈ ಸಾಧನೆಯನ್ನು ಗುರುತಿಸಿ ಮೊನ್ನೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಲು ಬಂದ ಪೆನ್ನಓಬಳಯ್ಯ ಅಸ್ವಸ್ಥರಾಗಿದ್ದರು. ಅವರ ಪರವಾಗಿ ಅವರ ಮಕ್ಕಳು ಪ್ರಶಸ್ತಿ ಸ್ವೀಕಾರ ಮಾಡಿದ್ದರು . ಪ್ರಶಸ್ತಿ ಪಡೆದ ಮರುದಿನವೇ ಅವರು ದೈವಾಧೀನರಾಗಿರುವುದು ದುರಾದೃಷ್ಟಕರ. ಸಿಂಪಾಡಿ ಪುರದ ಹೆಸರನ್ನು ತಮ್ಮ ವೀಣಿಗಳ ಮೂಲಕ ರಾಷ್ಟ್ರಕ್ಕೆ ಪರಿಚಯಿಸಿದ ಪೆನ್ನ ಓಬಳಯ್ಯ ಅವರ ಸಾಂಸ್ಕೃತಿಕ ಸೇವೆಯನ್ನು ನೆನೆಯುತ್ತಾ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular