ನವದೆಹಲಿ : ಜಗದೀಪ್ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸಿಪಿ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.
ದೇಶದ 15 ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಸಿಪಿ ರಾಧಾಕೃಷ್ಣನ್ ಅವರು ಇಂದು ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
ಇಂದು ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಸೇರಿದಂತೆ ಕೇಂದ್ರದ ಸಚಿವರು ಸಮ್ಮುಖದಲ್ಲಿ ಸಿ ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.