Friday, June 6, 2025
Google search engine

Homeರಾಜ್ಯಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೌರಿಂಗ್, ವೈದೇಹಿ ಹಾಗೂ ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ ಎಂದು ಉದ್ಯಮಿ ವಿಜಯ್‌ ಮಲ್ಯ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಐಪಿಎಲ್ ಚಾಂಪಿಯನ್‌ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular