Wednesday, May 13, 2026
Google search engine

Homeರಾಜಕೀಯವಿಜಯ್ ವಿಶ್ವಾಸಮತ ಗೆಲುವು‌ : 144 ಶಾಸಕರ ಬೆಂಬಲದೊಂದಿಗೆ ಸರ್ಕಾರಕ್ಕೆ ಬಲ

ವಿಜಯ್ ವಿಶ್ವಾಸಮತ ಗೆಲುವು‌ : 144 ಶಾಸಕರ ಬೆಂಬಲದೊಂದಿಗೆ ಸರ್ಕಾರಕ್ಕೆ ಬಲ

ಚೆನ್ನೈ : ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ವಿಶ್ವಾಸಮತ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ. ಸರ್ಕಾರ ಪರವಾಗಿ 144 ಶಾಸಕರು ಮತ ಚಲಾಯಿಸುವ ಮೂಲಕ ವಿಜಯ್ ಬಹುಮತ ಸಾಬೀತುಪಡಿಸಿದ್ದಾರೆ. ಟಿವಿಕೆ, ಕಾಂಗ್ರೆಸ್‌, ಸಿಪಿಎಂ, ಸಿಪಿಐ, ಮುಸ್ಲಿಮ್‌ ಲೀಗ್‌, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್‌ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಮತ್ತೊಂದೆಡೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ವಿಶ್ವಾಸಮತ ಪ್ರಕ್ರಿಯೆ ವೇಳೆ ಸಭಾತ್ಯಾಗ ಮಾಡಿದ್ದು, ಬಿಜೆಪಿ ಶಾಸಕನೊಬ್ಬ ಮತದಾನದಿಂದ ದೂರ ಉಳಿದರೆ, ಎಐಎಡಿಎಂಕೆಯ 22 ಶಾಸಕರು ಸರ್ಕಾರದ ವಿರುದ್ಧ ಮತ ಹಾಕಿದರು.

234 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಅಗತ್ಯವಿದೆ. ವಿಜಯ್ ತಿರುಚಿ ಪಶ್ಚಿಮ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಹಿನ್ನೆಲೆ ಅದನ್ನು ಒಂದು ಎಂದು ಪರಿಗಣಿಸಲಾಗುತ್ತದೆ.

ಇದರ ಜೊತೆಗೆ ತಿರುಪತ್ತೂರು ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಮದ್ರಾಸ್‌ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆ ವಿಧಾನಸಭೆಯ ಬಲ 232ಕ್ಕೆ ಇಳಿದಿದ್ದು, ಬಹುಮತಕ್ಕೆ 116 ಶಾಸಕರ ಬೆಂಬಲ ಅಗತ್ಯವಿತ್ತು.

RELATED ARTICLES
- Advertisment -
Google search engine

Most Popular