Saturday, May 24, 2025
Google search engine

Homeರಾಜ್ಯಸುದ್ದಿಜಾಲವಿಜಯನಗರ ವಿ.ವಿ: ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ವಿಜಯನಗರ ವಿ.ವಿ: ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಬಳ್ಳಾರಿ: ಬಾಬು ಜಗಜೀವನ್ ರಾಮ್ ಅವರು ದಲಿತರಿಗೆ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿ.ಆರ್. ರಮೇಶ ಓಲೇಕಾರ ಹೇಳಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಬು ಜಗಜೀವನ್ ರಾಂ ಅವರ 117ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಬು ಜಗಜೀವನ್ ರಾಂ ಅವರು ತುಳಿತಕ್ಕೊಳಗಾದವರ ಹಕ್ಕಿಗಾಗಿ ಹೋರಾಡಿದವರು, ಹಸಿರು ಕ್ರಾಂತಿಯ ಹರಿಕಾರ. ಆಹಾರ ಉತ್ಪಾದನೆಯಲ್ಲಿ ಅವರ ಸೇವೆ ಸ್ಮರಣೀಯ. ವಿದ್ಯಾರ್ಥಿಗಳು ಜಗಜೀವನ್ ರಾಮ್ ಅವರ ಜೀವನ ಕ್ರಮವನ್ನು ಅಳವಡಿಸಿಕೊಳ್ಳಬೇಕು. ಡಾ.ಡಾ.ಬಾಬು ಜಗಜೀವನ್ ರಾಂ, ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಎಚ್.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಾಬು ಜಗಜೀವನ್ ರಾಂ ಅವರ ಚಿಂತನೆಗಳು ಇಂದಿಗೂ ಅವಿಸ್ಮರಣೀಯ. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಡಾ.ಕುಮಾರ ಸೇರಿದಂತೆ ವಿವಿಧ ನಿಕಾಯಗಳ ಡೀನರುಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular