Friday, May 23, 2025
Google search engine

Homeರಾಜ್ಯಗಣರಾಜ್ಯೋತ್ಸವ ಆಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ಗಣರಾಜ್ಯೋತ್ಸವ ಆಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಾರಿಸಿದ ಗುಂಡು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ತಗುಲಿ, ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.

ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ‌. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆಗೆ ತಾಗಿದ್ದು ಗಾಯಗೊಂಡಿದ್ದಾರೆ.

ಹಿರೇರೂಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular