ಮದ್ದೂರು: ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ ಹಿನ್ನಲೆ ಮದ್ದೂರು ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದರು.
ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದ ಹಿನ್ನೆಲೆ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಲಿ ಸದಸ್ಯ ನಂದೀಶ್ ಗೌಡ ನೇತೃತ್ವದಲ್ಲಿ ಗ್ರಾಮದ ಪ್ರತಿ ಮನೆಗಳಿಗೂ ಸಿಹಿ ಹಂಚಿ ಗ್ರಾಮದ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.