Thursday, June 19, 2025
Google search engine

Homeರಾಜ್ಯಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ದೂರು ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ದೂರು ದಾಖಲು

ತಮಿಳುನಾಡು: ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚುನಾವಣಾ ನೀತಿ ಸಂಹಿತೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರ ಸಮಯ ಉಲ್ಲಂಘನೆಗಾಗಿ ಅಣ್ಣಾಮಲೈ ಹಾಗೂ ಇತರ ಕೆಲವು ಪಕ್ಷದ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಲಾಗಿದೆ.

ಕೊಯಂಬತ್ತೂರಿನ ಅವರಮ್‌ಪಾಳಯಂ ಪ್ರದೇಶದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಸಮಯ ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಹಾಗೂ ಇದರ ಮೈತ್ರಿ ಪಕ್ಷದ ಕಾರ್ಯಕರ್ತರು ಏ.೧೧ರ ರಾತ್ರಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಜಗಳ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ಕಾರ್ಯಕರ್ತ ಪೀಲಮೇಡು ಅವರು ಐಪಿಸಿ ಸೆಕ್ಷನ್‌ಗಳ ವಿವಿಧ ಕಾಯ್ದೆಯಡಿ ದೂರು ದಾಖಲಿಸಿದ್ದರು. ಡಿಎಂಕೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯ ವಿರುದ್ಧ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular