Wednesday, June 18, 2025
Google search engine

Homeರಾಜ್ಯಸುದ್ದಿಜಾಲಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ : ಟಿ. ರಾಘವೇಂದ್ರ

ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ : ಟಿ. ರಾಘವೇಂದ್ರ

ರಾಮನಗರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ಪ್ರತಿಯೊಂದು ಮತ ಅತ್ಯಅಮೂಲ್ಯವಾದದ್ದು, ದೇಶದ ಸುಭದ್ರ ಭವಿಷ್ಯ ಕ್ಕಾಗಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಸಹಾಯಕ ಚುನಾವಣಾಧಿಕಾರಿ ಟಿ. ರಾಘವೇಂದ್ರ ಅವರು ಹೇಳಿದರು.

ಕನಕಪುರ ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಅಂಗವಾಗಿ ತಾಲೂಕು ಕಚೇರಿ ಆವರಣದಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಲು ಆಯೋಜಿಸಲಾಗಿದ್ದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಉತ್ತಮ ನಾಳೆಗಳು ಬೇಕಾದರೆ ಮತದಾನ ಮಾಡುವ ಮೂಲಕ ಎಲ್ಲ ಅರ್ಹ ನಾಗರಿಕರು ಮತದಾನದ ಹಕ್ಕು ಚಲಾಯಿಸಬೇಕು. ಮತದಾನ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢಗೊಳಿಸಿ ಎಂದರು. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡಬೇಕು. ವಿಶೇಷವಾಗಿ ೮೦ ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿಶೇಷ್ಯ ಚೇತನರು ಹಿರಿಯ ನಾಗರಿಕರು ತಪ್ಪದೆ ಮತದಾನ ಮಾಡುವಂತೆ ತಿಳಿಸಿದರು.

ತಹಶೀಲ್ದಾರರಾದ ಸ್ಮಿತಾರಾಮು ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಭದ್ರಪಡಿಸಲು ಪ್ರತಿಯೊಬ್ಬರು ಮತ ಚಲಾಯಿಸಬೇಕು. ಮತದಾನ ನಮ್ಮ ಹಕ್ಕು, ಕಡ್ಡಾಯವಾಗಿ ಮತದಾನ ಮಾಡಿ, ಯಾರೊಬ್ಬರೂ ಮತಚಲಾಯಿಸದೆ ಹೊರಗುಳಿಯಬಾರದು ೧೮ ವರ್ಷ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಕೊಳ್ಳಬೇಕು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಓಟರ್ ಹೆಲ್ಪ್ ಲೈನ್ ಆಪ್ ಮೂಲಕ ಪರಿಶೀಲಿಸಿವ ಬಗ್ಗೆ ಹಾಗೂ ಮತದಾನದ ಮಹತ್ವ ಕುರಿತು ಮಾಹಿತಿ ನೀಡಿದರು.

ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ರ್‍ಯಾಲಿ ನಡೆಸಿ ಕಡ್ಡಾಯ ಮತದಾನ ಮಾಡುವಂತೆ ಘೋಣೆ ಕೂಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕನಕಪುರ ತಾಲ್ಲೂದಕು ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಬಾಬು, ನಗರಸಭೆ ಆಯುಕ್ತರಾದ ಮಹದೇವ, ವಿಕಲಚೇತನ (ವಿಶೇಷಚೇತನ) ಕಾರ್ಯಕರ್ತರು, ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ತಾಲ್ಲೂಕುಪಂಚಾಯತಿ ಹಾಗೂ ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular