Monday, January 19, 2026
Google search engine

Homeಅಪರಾಧಮೈಸೂರಿನ ಉದಯಗಿರಿಯಲ್ಲಿ ಸಾರ್ವಜನಿಕವಾಗಿ ಲಾಂಗು ಹಿಡಿದು ಓಡಾಟ

ಮೈಸೂರಿನ ಉದಯಗಿರಿಯಲ್ಲಿ ಸಾರ್ವಜನಿಕವಾಗಿ ಲಾಂಗು ಹಿಡಿದು ಓಡಾಟ

ಮೈಸೂರು : ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ.

ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ ಕಾರಣವಾಗಿದೆ. ಭಾನುವಾರ ನಡೆದ ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸರಿಯಾಗಿದೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular