ಮಂಡ್ಯ: ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆ ಅಡಿ ನಗರದ ಕಲ್ಲಹಳ್ಳಿ ಬೆಂಗಳೂರು- ಮೈಸೂರು ರಸ್ತೆಯಲ್ಲಿನ ಎ.ಪಿ.ಎಂ.ಸಿ. ಕಛೇರಿ ಎದುರು ಅಳವಡಿಸಿರುವ ೬೧೦ ಮಿ.ಮೀ. ವ್ಯಾಸದ ಫೀಡರ್ ಕೊಳವೆ ಮಾರ್ಗವನ್ನು ಮುಖ್ಯ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿಯನ್ನು ಇಂದು ಫೆ.೭ ರಂದುಕೈಗೊಳ್ಳಬೇಕಾಗಿರುವುದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದು.
ಇಂದು ಮತ್ತು ನಾಳೆ ಫೆ. ೭ ಮತ್ತು ೦೮ ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಮಂಡ್ಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಣ ಚರಂಡಿ ಮಂಡಳಿ, ನಿರ್ವಹಣಾ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.