Saturday, April 18, 2026
Google search engine

Homeರಾಜಕೀಯಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಯಾವುದೇ ಸ್ಪಷ್ಟ ಬಹುಮತವಿಲ್ಲದೆ ಸೋಲಾಗಿದೆ. ಇದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾತಿ ವಿಧೇಯಕವನ್ನು ನಾವು ವಿರೋಧ ಮಾಡಿಲ್ಲ. ಈಗ ಮಹಿಳಾ ಮೀಸಲಾತಿ ವಿಧೇಯಕ, ಕ್ಷೇತ್ರ ಮರುವಿಂಗಡಣೆ ಬಿಲ್, ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್​ಗಳನ್ನ ಒಟ್ಟಿಗೆ ಮಿಕ್ಸ್ ಮಾಡಿದ್ದರು.ಕೇವಲ ಮಹಿಳಾ ಮೀಸಲಾತಿ ವಿಧೇಯಕ ಒಂದೇ ಆಗಿದ್ದರೆ ಈಗಾಗಲೇ ಅದು ಅಂಗೀಕಾರವಾಗುತ್ತಿತ್ತು ಎಂದು ಸಿಎಂ ಹೇಳಿದ್ದಾರೆ. ಬಿಜೆಪಿಯವರು ರಾಜಕೀಯ ಮಾಡುವುದಕ್ಕಾಗಿ 3 ವಿಧೇಯಕ ಮಿಕ್ಸ್ ಮಾಡಿದ್ದರು. ನಾವು ಕ್ಷೇತ್ರ ಮರುವಿಂಗಡಣಾ ವಿಧೇಯಕಕ್ಕೆ ಮಾತ್ರ ವಿರೋಧಿಸಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕವನ್ನು ನಾವು ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಇದೇ ವಿಚಾರವಾಗಿ ದೆಹಲಿಯಲ್ಲಿ ಪರಿಷತ್​ನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ವಿಧೇಯಕಕ್ಕೆ ಸೋಲಾಗಿಲ್ಲ, ಬಿಜೆಪಿಯ ಕುಟಿಲ ನೀತಿಗೆ ಸೋಲಾಗಿದೆ. ಲಕ್ಷಾಂತರ ಜನ ಕಷ್ಟಪಟ್ಟು ಸ್ವಾತಂತ್ರ್ಯ ಕೊಡಿಸಿದ ದೇಶದಲ್ಲಿ ಮೋಸದಿಂದ ಅಧಿಕಾರಕ್ಕೆ ಬರಲು ಸಂಚು ರೂಪಿಸಲಾಗಿತ್ತು ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular