ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಪಾಕ್ ಪ್ರಧಾನಿ ಶೆಬಾಜ್ ಷರೀಫ್ ಶಾಕ್ ನೀಡಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು, “ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಪಂದ್ಯ ಆಡುವುದಿಲ್ಲ” ಎಂಬ ಅಧಿಕೃತ ನಿಲುವನ್ನು ಪ್ರಕಟಿಸಿದ್ದಾರೆ
ಭದ್ರತಾ ಕಾರಣ ನೀಡಿ ಭಾರತಕ್ಕೆ ಬರಲು ನಿರಾಕರಿಸಿದ್ದ ಬಾಂಗ್ಲಾದೇಶದ ನಿಲುವನ್ನು ಪಾಕಿಸ್ತಾನ ಬೆಂಬಲಿಸಿದೆ. ಕ್ರೀಡೆಯಲ್ಲಿ ರಾಜಕೀಯ ಇರಬಾರದು ಎಂದು ಪ್ರತಿಪಾದಿಸಿರುವ ಷರೀಫ್, ಐಸಿಸಿ ಬಾಂಗ್ಲಾದೇಶದ ಬೇಡಿಕೆಯನ್ನು ತಿರಸ್ಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 15ರಂದು ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ-ಪಾಕ್ ನಡುವೆ ಪಂದ್ಯ ನಿಗದಿಯಾಗಿದೆ. ಆದರೆ, ಪಾಕಿಸ್ತಾನದ ಈ ಹಠಾತ್ ನಿರ್ಧಾರದಿಂದಾಗಿ ಟೂರ್ನಿಯ ಭವಿಷ್ಯದ ಬಗ್ಗೆ ಈಗ ದೊಡ್ಡ ಪ್ರಶ್ನೆ ಎದ್ದಿದೆ.



