ಹೈದರಾಬಾದ್: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಎನ್ಸಿಬಿ ವಶಪಡಿಸಿಕೊಂಡಿದ್ದು, ಮಹಿಳೆಯನ್ನು ಬಂಧಿಸಿದೆ.
ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಚರಣೆ ನಡೆಸಿದ ಎನ್ಸಿಬಿ ಅಧಿಕಾರಿಗಳು, ಮಹಿಳೆಯ ಎರಡು ಚೆಕ್‌ಇನ್ ಬ್ಯಾಗ್‌ಗಳಲ್ಲಿ ಗಾಂಜಾ ಪತ್ತೆಹಚ್ಚಿದ್ದಾರೆ. ಮಹಿಳೆ ದುಬೈ ಮೂಲಕ ಬ್ಯಾಂಕಾಕ್‌ನಿಂದ ಭಾರತಕ್ಕೆ ಆಗಮಿಸಿದ್ದಾಳೆ. ಅಂತಾರಾಷ್ಟ್ರೀಯ ಗಾಂಜಾ ಕಳ್ಳಸಾಗಣೆಯ ಅಂಶವಿರುವ ಸಾಧ್ಯತೆ ಇರುವುದರಿಂದ, ಭಾರತ ಮತ್ತು ಥೈಲ್ಯಾಂಡ್‌ನಲ್ಲಿರುವ ಸಂಪರ್ಕಗಳ ಬಗ್ಗೆ ತನಿಖೆ ಮುಂದುವರಿದಿದೆ. ಇಂತಹ ಪ್ರಕರಣಗಳು ಹಲವಾರು ವಿಮಾನ ನಿಲ್ದಾಣಗಳಲ್ಲಿ ಕಂಡುಬರುತ್ತಿವೆ ಎಂದು ಎನ್ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.