Saturday, February 7, 2026
Google search engine

Homeಅಪರಾಧಸ್ಕೂಟರ್ ಗೆ ಬಸ್ ಡಿಕ್ಕಿ: ಯುವತಿ ಸಾವು; ಪ್ರತಿಭಟನೆ

ಸ್ಕೂಟರ್ ಗೆ ಬಸ್ ಡಿಕ್ಕಿ: ಯುವತಿ ಸಾವು; ಪ್ರತಿಭಟನೆ

ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಮಂಗಳೂರಲ್ಲಿ ಪ್ರತಿಭಟನೆ ನಡೆಸಿದರು. ಯುವತಿಯ ಮೃತದೇಹವನ್ನು ತಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ
ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ನಗರದ ನಂತೂರು ವೃತ್ತದ ಬಳಿ ಮೊನ್ನೆ ರಾತ್ರಿ ಸ್ಕೂಟರ್ ಗೆ ಖಾಸಗಿ ಬಸ್ ವೊಂದು ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಯುವತಿ ತನ್ನ ಭಾವೀ ಪತಿ ಜೊತೆಗೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದರು. ಕೆಲ ದಿನಗಳಲ್ಲೇ ಯುವತಿಗೆ ಮದುವೆ ನಿಶ್ಚಯವಾಗಿತ್ತು.

RELATED ARTICLES
- Advertisment -
Google search engine

Most Popular