ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು. ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು’ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್, 09 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ (ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಡಿ.ಆರ್.ಪ್ರಸನ್ನ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.