ಮಂಡ್ಯ: ಜಿಲ್ಲೆಯ ಮೇಲುಕೋಟೆಯ ಐತಿಹಾಸಿಕ ಯೋಗನರಸಿಂಹ ಸ್ವಾಮಿ ದೇವಾಲಯದ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಕರ್ತವ್ಯ ಲೋಪದ ಆರೋಪದಡಿ ಅಮಾನತು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡವರಲ್ಲಿ ಪ್ರಧಾನ ಅರ್ಚಕ ನಾರಾಯಣ ಭಟ್, ಪಾರುಪತೇಗಾರ್ ಶೀಧರ್, ಪರಿಚಾರಕ ತಿರುವೆಂಕಟಾಚಾರ್ ಹಾಗೂ ಮೂವರು ಸಿಬ್ಬಂದಿ ಸೇರಿದ್ದಾರೆ. ಜನವರಿ 11ರಂದು ನಡೆದಿದ್ದ ಕಳ್ಳತನದ ಬಳಿಕ ಜೂನ್ನಲ್ಲಿ ದೂರು ದಾಖಲಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೋಗನರಸಿಂಹ ಸ್ವಾಮಿ ದೇವಾಲಯ ಮಂಡ್ಯ ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.



