ಮಂಡ್ಯ: 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿ ಸಂಭ್ರಮದಿಂದ ಯೋಗೋತ್ಸವ ಕಾರ್ಯಕ್ರಮ ಜರುಗಿತು.
ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ವತಿಯಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಚಂದ್ರವನ ಆಶ್ರಮ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಸ್ವಾಮೀಜಿ ಚಾಲನೆ ನೀಡಿದರು.
ಯೋಗೋತ್ಸವ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ಜೊತೆ ಯೋಗ ಮಾಡಿ ಸರ್ಕಾರಿ ಅಧಿಕಾರಿಗಳು ಗಮನ ಸೆಳೆದರು.
ಯೋಗೋತ್ಸವ ಶಿಬಿರದ ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ, ಎಡಿಸಿ, ಜಿ.ಪಂ ಸಿಇಒ,ಸೇರಿ ಹಲವು ಅಧಿಕಾರಿಗಳು, ನೂರಾರು ಶಿಬಿರಾರ್ಥಿಗಳು ಭಾಗಿಯಾಗಿದ್ದರು.